ಆದರ್ಶ ಶಿಕ್ಷಕ, ನುಡಿಗಾರುಡಿಗ, ಶಿಕ್ಷಣತಜ್ಞ, ಕೀರ್ತನಕಾರರಾಗಿ ನಾಡು, ನುಡಿಗೆ ಅಪಾರ ಸೇವೆಯನ್ನು ಸಲ್ಲಿಸಿದ್ದ ಪಂ. ಚೆನ್ನಪ್ಪ ಎರೇಸೀಮೆಯವರ ಜನ್ಮಶತಮಾನೋತ್ಸವ ಸಮಾರಂಭವನ್ನು ಅಕ್ಟೋಬರ್ 12, 2019 ರಂದು ಮಧ್ಯಾಹ್ನ 3 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸುತ್ತೂರು ಜಗದ್ಗುರು ಪರಮಪೂಜ್ಯ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಸಮಾರಂಭವನ್ನು ಉದ್ಘಾಟಿಸಿ, ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀ ಸಿದ್ಧಗಂಗಾ ಕ್ಷೇತ್ರಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರು ಅಧ್ಯಕ್ಷತೆ ವಹಿಸಲಿದ್ದು, ನೇತೃತ್ವವನ್ನು ಶ್ರೀ ಬೇಲಿಮಠದ ಶಿವಾನುಭವ ಚರಮೂರ್ತಿ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳವರು ವಹಿಸಲಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಸತಿ ಸಚಿವರಾದ ಶ್ರೀ ವಿ. ಸೋಮಣ್ಣನವರು, ಹಿರಿಯ ಜಾನಪದ ವಿದ್ವಾಂಸರೂ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪನವರು, ಹಿರಿಯ ಸಂಶೋಧಕರಾದ ಡಾ. ಎಂ. ಚಿದಾನಂದಮೂರ್ತಿಯವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮನುಬಳಿಗಾರ್ ಅವರು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಸ್. ಪರಮಶಿವಯ್ಯನವರು, ಹಿರಿಯ ವಿಮರ್ಶಕರಾದ ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿಯವರು, ಪಂಡಿತ ವಿರೂಪಾಕ್ಷಪ್ಪ ಎರೇಸೀಮೆಯವರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಹಿರಿಯ ನಿಘಂಟು ತಜ್ಞರಾದ ಶ್ರೀ ಹೀ.ಚಿ. ಶಾಂತವೀರಯ್ಯನವರಿಗೆ ‘ಪಂಡಿತ ಚೆನ್ನಪ್ಪ ಎರೇಸೀಮೆ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಂಗವಾಗಿ ಖ್ಯಾತ ಹಿಂದೂಸ್ತಾನಿ ಗಾಯಕರಾದ ಶ್ರೀಮತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಪಂಡಿತ ಚೆನ್ನಪ್ಪ ಎರೇಸೀಮೆ ವಿರಚಿತ ‘ಉದ್ದಾನೇಶ ಚರಿತೆ’ ಕನ್ನಡ ಗಮನ ವಾಚನವನ್ನು ಶ್ರೀಮತಿ ಲಕ್ಷ್ಮೀ ಜಯಪ್ರಕಾಶರವರು ನಡೆಸಿಕೊಡಲಿದ್ದು, ವ್ಯಾಖ್ಯಾನವನ್ನು ಶ್ರೀ ಸಿದ್ಧಗಂಗಾ ಮಠದ ಶ್ರೀ ಕೋ.ರಂ. ಬಸವರಾಜು ಅವರು ಮಾಡಿಕೊಡಲಿದ್ದಾರೆ ಎಂದು ಲಿಂ. ಪಂಡಿತ ಚೆನ್ನಪ್ಪ ಎರೇಸೀಮೆ ಜನ್ಮಶತಮಾನೋತ್ಸವ ಸಮಿತಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

Share This
%d bloggers like this: